ಬೆಂಗಳೂರು: ಹುಬ್ಬಳ್ಳಿ ಧಾರವಾಡ, ಕಲಬುರ್ಗಿ ಹಾಗೂ ಬೆಳಗಾವಿ ಮಹಾನಗರ ಪಾಲಿಕೆಗಳ ಚುನಾವಣೆಗೆ ರಾಜ್ಯ ಬಿಜೆಪಿ ಉಸ್ತುವಾರಿಗಳನ್ನು ನೇಮಕ ಮಾಡಿದೆ.
ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ ಕುಮಾರ್ ಸುರಾನ ಅವರನ್ನು ರಾಜ್ಯ ಉಸ್ತುವಾರಿ ಚುನಾವಣೆ ಉಸ್ತುವಾರಿಯನ್ನಾಗಿ ಮಾಡಲಾಗಿದೆ.
ಹುಬ್ಬಳ್ಳಿ- ಧಾರವಾಡ ಜವಳಿ.ಸಚಿವರಾದ ಶಂಕರ ಪಾಟೀಲ್ ಮುನೇನಕೊಪ್ಪ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಅವರನ್ನು ನೇಮಿಸಲಾಗಿದೆ.
ಬೆಳಗಾವಿ ಮಹಾನಗರ ಪಾಲಿಕೆಗೆ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹಾಗೂ ಶಾಸಕರಾದ ಸತೀಶ್ ರೆಡ್ಡಿ ಹಾಗೂ ಅಭಯ್ ಪಾಟೀಲ್ ಮತ್ತು ಕಲಬುರ್ಗಿ ಮಹಾನಗರ ಪಾಲಿಕೆಗೆ ಬೃಹತ್ ಕೈಗಾರಿಕೆ ಸಚಿವರಾದ ಮುರುಗೇಶ್ ನಿರಾಣಿ ಹಾಗೂ ಶಾಸಕರಾದ ಎನ್. ರವಿಕುಮಾರ್ ಹಾಗೂ ದತ್ತಾತ್ರೇಯ ಪಾಟೀಲ್ ರೇವೂರ್ ಅವರನ್ನು ನೇಮಿಸಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.
ಇವರೊಂದಿಗೆ ಸ್ಥಳೀಯ ಸಂಸದರು ಹಾಗೂ ಶಾಸಕರನ್ನು ಉಸ್ತುವಾರಿಗಳಾಗಿ ಕಾರ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ.