ಬೆಂಗಳೂರು; ಬಿಎಸ್ಸಿಗೆ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಮೂಲಕ ಪ್ರವೇಶ ನೀಡುವ ಚಿಂತನೆಯನ್ನು ಸರಕಾರ ಕೈಬಿಟ್ಟಿದೆ ಎಂದು ಎಂದು ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ತಿಳಿಸಿದ್ದಾರೆೆ.
ಬೆಂಗಳೂರಿನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ವಿಜ್ಞಾನ ಬೋಧನೆ ಮತ್ತು ಕಲಿಕೆಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪದವಿ ವಿಜ್ಞಾನ ಪ್ರವೇಶಕ್ಕೂ ಸಿಇಟಿ ತರುವ ಯೋಚನೆ ಇತ್ತು. ಆದರೆ, ಸದ್ಯಕ್ಕೆ ಕೈಬಿಡಲಾಗಿದೆ ಎಂದು ತಿಳಿಸಿದರು.
ಪಿಯುಸಿ ಪಾಸಾದವರೆಲ್ಲ ಸಿಇಟಿ ಬರೆಯಬಹುದು:
ಸಿಇಟಿ ಪರೀಕ್ಷೆ ಬಗ್ಗೆ ಹೈಕೋರ್ಟ್ ನೀಡಿರುವ ಸೂಚನೆ ಬಗ್ಗೆ ಇನ್ನೂ ಮಾಹಿತಿ ಇಲ್ಲ. ಪ್ರಸಕ್ತ ವರ್ಷ ಪಿಯುಸಿ ಪಾಸಾದವರೆಲ್ಲ ಸಿಇಟಿ ಬರೆಯಬಹುದು. ನ್ಯಾಯಾಲಯ ನೀಡಿರುವ ಆದೇಶದ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮತ್ತು ಸಚಿವರ ಜತೆ ಚರ್ಚೆ ನಡೆಸಲಾಗುವುದು ಎಂದು ಡಿಸಿಎಂ ಇದೇ ವೇಳೆ ತಿಳಿಸಿದರು.