ಬೆಂಗಳೂರು: ಕರ್ನಾಟಕ ಪೊಲೀಸ್ ಅಕಾಡೆಮಿ ವತಿಯಿಂದ ಮೈಸೂರಿನಲ್ಲಿ ಬುಧವಾರ ಆಯೋಜಿಸಲಾಗಿದ್ದ 35 ನೇ ತಂಡದ ಪ್ರೊಬೇಷನರಿ ಪೊಲೀಸ್ ಉಪ ಅಧೀಕ್ಷಕರು ( ಸಿವಿಲ್) ಹಾಗೂ ಅಬಕಾರಿ ಉಪ ಅಧೀಕ್ಷಕರು ಮತ್ತು 43ನೇ ತಂಡದ ಪ್ರೊಬೇಷನರಿ ಪೊಲೀಸ್ ಉಪ ನಿರೀಕ್ಷಕರ ನಿರ್ಗಮನ ಪಥ ಸಂಚಲನ ಗಮನಸೆಳೆಯಿತು.
ಕಾರ್ಯಕ್ರಮದಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಭಾಗವಹಿಸಿದರು. ತರಬೇತಿ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಪ್ರಶಿಕ್ಷಣಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಶುಭ ಕೋರಿದರು.