ಚೆನ್ನೈ: ಪೂರ್ವ ರಾಜ್ಯಗಳಲ್ಲಿ ‘ಫೆಂಗಲ್’ ಚಂಡಮಾರುತ ರುದ್ರ ನರ್ತನಕ್ಕೆ ನಾಲ್ವರು ಬಲಿಯಾಗಿದ್ದಾರೆ. ಭಾನುವಾರತಡರಾತ್ರಿ 2 ಗಂಟೆಗೆ ತಮಿಳುನಾಡು ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆಯಾಗಿದ್ದು, ವಿದ್ಯುದಾಘಾತ ಹಾಗೂ ಭೂಕುಸಿತದಿಂದಾಗಿ ಹಲವಾರು ಸಾವನ್ನಪ್ಪಿದ್ದಾರೆ.
ಮುಂದಿನ 48 ಗಂಟೆಗಳ ಕಾಲ ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶ ರಾಜ್ಯಗಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚೆನ್ನೈ ಮತ್ತು ನಗರದ ಮೂರು ನೆರೆಯ ಜಿಲ್ಲೆಗಳು ಸೇರಿದಂತೆ 13 ಜಿಲ್ಲೆಗಳಿಗೆ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದೂ ಹೇಳಲಾಗುತ್ತಿದೆ.
ಚಂಡಮಾರುತದ ಹಿನ್ನೆಲೆಯಲ್ಲಿ ತಮಿಳುನಾಡು, ಆಂಧ್ರಪ್ರದೇಶ ಮತ್ತು ಪುದುಚೇರಿಯ ಹಲವು ಪ್ರದೇಶಗಳಿಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.