ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ಆಯ್ಕೆಯಾಗಿರುವುದನ್ನು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಾಗತಿಸಿದ್ದಾರೆ.
ಯಡಿಯೂರಪ್ಪ ವಿರುದ್ದ ಸಿಡಿದೆದ್ದಿದ್ದ ಯತ್ನಾಳ್ ಇದೀಗ ಬಸವರಾಜ್ ಬೊಮ್ಮಾಯಿ ಅವರ ಆಯ್ಕೆ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಪ್ರತಿಕ್ರಿಯೆ ನೀಡಿದ ಅವರು, ಬಸವರಾಜ್ ಬೊಮ್ಮಾಯಿ ಸಿಎಂ ಆಗುವುದಕ್ಕರ ನಮ್ಮ ಸಮ್ಮತಿ ಇದೆ ಎಂದರು.
ಬಿಹೆಪಿ ವರಿಷ್ಠರು ಎಲ್ಲರ ಅಭಿಪ್ರಾಯ ಪಡೆದು ಸರ್ವಾನುಮತದಿಂದ ಬೊಮ್ಮಾಯಿ ಅವರನ್ನು ಸಿಎಂ ಆಗಿ ಆಯ್ಕೆ ಮಾಡಿದ್ದಾರೆ. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದವರು ಹೇಳಿದರು.