ಬೆಂಗಳೂರು: ಬಿಎಸ್ ಪಿ ಶಾಸಕ ಎನ್.ಮಹೇಶ್ ಅವರು ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಸೇರ್ಪಡೆ ಮಹೇಶ್ ಬಿಜೆಪಿ ಸೇರಿದರು. ಪಕ್ಷದ ಶಾಲು ಹಾಕುವ ಮೂಲಕ ಬಿಜೆಪಿ ನಾಯಕರು ಮಹೃಶ್ ಅವರನ್ನು ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಶಾಸಕ ಮಹೇಶ್ ಚಳುವಳಿಯ ಹಿನ್ನೆಲೆಯಿಂದ ಬಂದವರು. ಅವರ ಸಂಘಟನಾ ಶಕ್ತಿ ಬಹು ದೊಡ್ಡದು ಎಂದರು.
ಮಹೇಶ್ ಅವರು ಶಾಸಕರಾಗುವ ಮುನ್ನವೇ ದಲಿತರ ಹೃದಯ ಗೆದ್ದವರು. ಕೊಳ್ಳೆಗಾಲದ ಎಲ್ಲ ಜನಾಂಗ ಅವರನ್ನ ಆರಿಸಿದೆ. ನಮ ಪಕ್ಷದ ಸಿದ್ಧಾಂತ ಮನವರಿಕೆಯಾದ ಮೇಲೆ ಬರ್ತಿದ್ದಾರೆ. ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದವರು ಹೇಳಿದರು.
ಈ ಹಿಂದೆ ಯಡಿಯೂರಪ್ಪನವರಿಗೆ ಸಹಕಾರ ಕೊಟ್ಟಿದ್ದರು. ಇಂದು ಅವರು ನಮ್ಮ ಪಕ್ಷಕ್ಕೆ ಸೇರ್ಪಡೆಯಾದರು. ಅವರ ಸೇವೆಯನ್ನ ಪಕ್ಷ ಬಳಸಿಕೊಳ್ಳಲಿದೆ ಎಂದರು.