ತುಮಕೂರು : ತುಮಕೂರು ಜಿಲ್ಲೆ ಮಧುಗಿರಿ ಸಮೀಪ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಫೋಟ ಮಾಡಿದ್ದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್’ಗೆ ನ್ಯಾಯಾಲಯವು ಜಾಮೀನು ನಿಮಂಜೋರು ಮಾಡಿದೆ.
ಸೋಡಿಯಂ ಮೆಟಲ್ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟ ಮಾಡಿದ್ದ ಆರೋಪದಲ್ಲಿ ಮಿಡಿಗೇಶಿ ಠಾಣೆಯ ಪೊಲೀಸರು ಡ್ರೋನ್ ಪ್ರತಾಪ್ ಅವರನ್ನು ಇತ್ತೀಚೆಗೆ ಬಂಧಿಸಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಡ್ರೋನ್ ಪ್ರತಾಪ್ ಅವರಿಗೆ ಮಧುಗಿರಿಯ 4ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.



















































