ದೆಹಲಿ, ಮೇ 10: ಬಿಜೆಪಿ ಎಲ್ಲಾ ಚುನಾವಣೆಗಳಿಗೂ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಬಿಪಿಎಂ, ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಗೆ ಬಿಜೆಪಿ ಸಿದ್ದವಿದೆಯೇ ಎಂದು ಕಾಂಗ್ರೆಸ್ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ಪಕ್ಷ ಅವರದ್ದನ್ನು ಅವರು ನೋಡಿಕೊಳ್ಳಬೇಕು. ಸಭೆಗಳಲ್ಲಿ ಬಡಿದಾಡಿಕೊಂಡು ಬಂದಿದ್ದಾರೆ. ನಾವು ಇಡೀ ರಾಜ್ಯ ಸುತ್ತಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗೆ ತಯಾರಿ ಮಾಡಿದ್ದೆವು. ಬಿಬಿಎಂಪಿಯಲ್ಲಿಯೂ ಸಭೆಗಳನ್ನು ಮಾಡಿದ್ದೇವೆ. ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಅಧ್ಯಯನ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.