ಬೆಂಗಳೂರು: ಬಿಜೆಪಿ ರಾಷ್ಟ ಘಟಕದ ವಿಶೇಷ ಆಹ್ವಾನಿತರಾದ ಖುಷ್ಬೂ ಅವರು ಇಂದು ಪಕ್ಷದ ಮಲ್ಲೇಶ್ವರದ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಭೇಟಿ ನೀಡಿ ಪಕ್ಷದ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ಪಡೆದುಕೊಂಡರು.
ಪಕ್ಷವು ಸಂಘಟನಾತ್ಮಕವಾಗಿ ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾಣಾ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್ ಅವರು ಮಾಹಿತಿ ನೀಡಿದರು. ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷರಾದ ಶ್ರೀಮತಿ ಗೀತಾ ವಿವೇಕಾನಂದ, ವೈದ್ಯಕೀಯ ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಡಾ|| ಮಹೇಶ್ ನಲವಾಡ ಮತ್ತು ಪಕ್ಷದ ವಿವಿಧ ಪ್ರಕೋಷ್ಠಗಳ ಸಂಚಾಲಕರು ಹಾಗೂ ಆಹ್ವಾನಿತ ಪದಾಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
ಬಿಜೆಪಿ ರಾಷ್ಟ ಘಟಕದ ವಿಶೇಷ ಆಹ್ವಾನಿತ ಸದಸ್ಯರಾದ ಶ್ರೀಮತಿ @khushsundar ಅವರು ಇಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನಕ್ಕೆ ಭೇಟಿ ನೀಡಿ ಪಕ್ಷದ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ಪಡೆದುಕೊಂಡರು. (1/2) pic.twitter.com/HeXqlg1hPE
— BJP Karnataka (@BJP4Karnataka) December 30, 2021