ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನೇಮಕಗೊಂಡಿರುವ ಬಸವರಾಜ್ ಬೊಮ್ಮಾಯಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ರಾಜ್ಯಪಾಲರನ್ನು ಭೇಟಿಯಾದ ಬಸವರಾಜ್ ಬೊಮ್ಮಾಯಿ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.
ಶಾಸಕಾಂಗ ಸಭೆಯ ಬಳಿಕ ನೇರವಾರ ರಾಜಭವನಕ್ಕೆ ತೆರಳಿದ ಬೊಮ್ಮಾಯಿ ಅವರು ರಾಜ್ಯಪಾಲ ಗೆಹ್ಲೊಟ್ ಅವರನ್ನು ಮನವಿ ಪತ್ರ ನೀಡಿ, ಸರ್ಕಾರ ರಚಿಸಲು ಅನುಮತಿ ಕೋರಿದರು. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ನಾಯಕರು ಬಸವರಾಜ್ ಬೊಮ್ಮಾಯಿ ಜೊತೆಗಿದ್ದರು.
ರಾಜ್ಯಪಾಲರ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸುವುದಾಗಿ ತಿಳಿಸಿದರು. ಬುಧವಾರ ತಾವು ಒಬ್ಬರು ಮಾತ್ರ ಪ್ರಮಾಣವಚನ ಸ್ವೀಕರಿಸುತ್ತಿರುವುದಾಗಿ ಬೊಮ್ಮಾಯಿ ತಿಳಿಸಿದರು.