ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರನ್ನು ರಾಜ್ಯ ಸರ್ಕಾರ ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ರಾಜ್ಯದ ಉನ್ನತ ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರಕಾರ ಸೋಮವಾರ ವರ್ಗಾವಣೆ ಮಾಡಿದ್ದು, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರನ್ನು ನೇಮಕಾತಿ ವಿಭಾಗದ ಡಿಜಿಪಿಯನ್ನಾಗಿ ವರ್ಗಾವಣೆ ಮಾಟಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ಎಡಿಜಿಪಿ ಸಿ.ಹೆಚ್.ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.
ಪ್ರತಾಪ್ ರೆಡ್ಡಿ ಅವರು ಈವರೆಗೂ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೆಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಇದೇ ವೇಳೆ ಕೆಎಸ್ಆರ್ಪಿಯ ಹೆಚ್ಚುವರಿ ಪೊಲೀಸ್ ಮಹಾನಿರ್ದೆಶಕ ಅಲೋಕ್ ಕುಮಾರ್ ಅವರನ್ನು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಕೆಎಸ್ಆರ್ಪಿ ಎಡಿಜಿಪಿ ಆಗಿ ಆರ್.ಹಿತೇಂದ್ರ ಅವರನ್ನು ವರ್ಗಾಯಿಸಲಾಗಿದೆ.
ಇದೇ ಸಂದರ್ಭದಲ್ಲಿ, ಬೆಂಗಳೂ ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತ ಎಂ.ಎನ್. ಅನುಚೇತ್ ಅವರನ್ನು ಸಿಐಡಿ ಎಸ್.ಪಿ ಸ್ಥಾನಕ್ಕೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.