ಬೆಳಗಾವಿ ತಾಲೂಕಿನ ಅರಳೀಕಟ್ಟಿ ಗ್ರಾಮದ ಶ್ರೀ ತೋಂಟದಾರ್ಯ ವಿರಕ್ತ ಮಠದ ಶ್ರೀ ಶಿವಮೂರ್ತಿ ದೇವರ ನಿರಂಜನ ಪಟ್ಟಾಧಿಕಾರ ಮಹೋತ್ಸವದಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸಿ ಗ್ರಾಮದ ಮಹಾದ್ವಾರದ ಉದ್ಘಾಟನೆ ನೆರವೇರಿಸಿದರು. ಗದಗದ ತೋಂಟದಾರ್ಯ ಮಠದ ಶ್ರೀ ತೋಂಟದ ಸಿದ್ದರಾಮ ಸ್ವಾಮಿ, ಹುಕ್ಕೇರಿಯ ಗುರುಶಾಂತೇಶ್ವರ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ, ಚನ್ನರಾಜ್ ಹಟ್ಟಿಹೊಳಿ ಮತ್ತಿತರರು ಹಾಜರಿದ್ದರು.
© 2020 Udaya News – Powered by RajasDigital.