ಬೆಂಗಳೂರು: ಭ್ರಷ್ಟರ ಬೆನ್ನಾತ್ತಿರುವ ಲೋಕಾಯುಕ್ತ ಪೊಲೀಸರು ಶುಕ್ರವಾರ ಬೆಳ್ಳಂಬೆಳಿಗ್ಗೆ ಮತ್ತೆ ಕಾರ್ಯಾಚರಣೆಯ ಅಖಾಡಕ್ಕೆ ಧುಮುಕಿದ್ದಾರೆ. ಬೆಂಗಳೂರು, ಬೆಳಗಾವಿ, ರಾಯಚೂರು, ಬಾಗಲಕೋಟೆ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ಕೈಗೊಂಡಿದ್ದಾರೆ.
ರಾಯಚೂರಿನಲ್ಲಿ ಜವಾರ್ ಕಾಲೋನಿಯಲ್ಲಿರುವ ಜಿಲ್ಲಾ ಪಂಚಾಯತಿ ಲೆಕ್ಕಪತ್ರ ಸಹಾಯಕ ಅಧಿಕಾರಿ ನರಸಿಂಗರಾವ್ ಅವರ ಮನೆಯ ಮೇಲೆ ದಾಳಿ ನಡೆಸಲಾಗಿದೆ.
ಬಾಗಲಕೋಟೆಯ ವಿದ್ಯಾಗಿರಿಯಲ್ಲಿ ಹೊಲಗೇರಿ ಗ್ರಾಮ ಪಂಚಾಯಿತಿ ಪಿಡಿಒ ಹಿರೇಮಠ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.
ಬೆಳಗಾವಿಯ ಪ್ರಭಾರಿ ಸಬ್ ರಿಜಿಸ್ಟ್ರಾರ್ ಸಚಿನ್ ಮಂಡೇದ್ ಅವರ ಬೆಳಗಾವಿ ನಗರದ ಆನಗೋಳದಲ್ಲಿರುವ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ರಾಯಬಾಗ ತಾಲೂಕಿನ ಹಾರೂಗೇರಿ ವೆಟರ್ನರಿ ಇನ್ಸ್ ಪೆಕ್ಟರ್ ಸಂಜಯ್ ಮನೆ ಮೇಲೆ ಮೇಲೂ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.