ಇಂಫಾಲ್: ಮಣಿಪುರದಲ್ಲಿ ಬಿಜೆಪಿ-ಜೆಡಿಯು ಮೈತ್ರಿ ಮುರಿದುಬಿದ್ದಿದೆ. ಬಿಜೆಪಿ ನೇತೃತ್ವದ ಬಿರೇನ್ ಸಿಂಗ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಜೆಡಿಯು ಹಿಂತೆಗೆದುಕೊಂಡಿದೆ. ಪಕ್ಷದ ಈ ತೀರ್ಮಾನವನ್ನು ಜೆಡಿಎಸ್ ನಾಯಕರು ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರಿಗೆ ತಿಳಿಸಿದ್ದಾರೆ.
ಮಣಿಪುರ ಜೆಡಿಯು ರಾಜ್ಯ ಘಟಕದ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಪಕ್ಷದ ವರಿಷ್ಠರೂ ಆದ ಬಿಹಾರ ಸಿಎಂ ನಿತೀಶ್ ಕುಮಾರ್, ಮಣಿಪುರದ ಏಕೈಕ ಜೆಡಿಯು ಶಾಸಕ ಎಂಡಿ ಅಬ್ದುಲ್ ನಾಸಿರ್ ಅವರು ವಿರೋಧ ಪಕ್ಷಗಳ ಸ್ಥಾನದಲ್ಲಿ ಕುಳಿತುಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.