ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಮತ್ತೊಮ್ಮೆ ಪ್ರತಿಭಟನೆಯ ಅಖಾಡಕ್ಕೆ ಧುಮುಕಲು ಸಜ್ಜಾದಂತಿದೆ. ತಮ್ಮ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಹಾಗೂ ಅಧಿಕಾರಿಗಳ ಕಿರುಕುಳ ತಡೆಯುವಂತೆ ಸರ್ಕಾರದ ಮೇಲೆ ಒತ್ತಡ ಹೇರುವ ಸಂಬಂಧ ಈ ಬಾರಿ ನತ್ತೆ ಪ್ರತಿಭಟನೆಗೆ ಕೆಎಸ್ಸಾರ್ಟಿಸಿ ನೌಕರರ ಬಳಗ ಸಿದ್ದತೆ ನಡೆಸಿದೆ.
2021ರ ಮುಷ್ಕರದಲ್ಲಿ ಭಾಗಿಯಾದ ನೌಕರರನ್ನು ವಜಾಗೊಳಿದ ಕ್ರಮ ವಿರೋಧಿಸಿ ಪ್ರತಿಭಟನೆ ನಡೆಸಲು ತೀರ್ಮಾನಿಸಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ನಿಗಮಗಳ ನೌಕರರು ಮಾರ್ಚ್ 29ರಂದು ರಾಜ್ಯದಾದ್ಯಂತ ಪ್ರತಿಭಟನೆ ಅಥವಾ ಮುಷ್ಕರ ನಡರಸುವ ಬಗ್ಗೆ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ರಾಜ್ಯ ರಸ್ತೆ ಸಾರಿಗೆ ನಿಗಮಗಳ ಒಕ್ಕೂಟ ಹಾಗೂ CITU ಫೆಡೆರೇಷನ್ ಈ ಹೋರಾಟಕ್ಕೆ ಕರೆ ನೀಡಿದ್ದು, ಮಾರ್ಚ್ 29ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿರುವ ನೌಕರರು ಅಂದು ಸೇವೆಯನ್ನು ಬಹಿಷ್ಕರಿಸಿ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಮುಂದಾಗಿದ್ದಾರೆ. ಈ ಹೋರಾಟ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಯ ಬಸ್ಗಳ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಗಳಿವೆ.
ಅಂದು, ಸಾರಿಗೆ ಸಚಿವ ಶ್ರೀರಾಮುಲು ಅವರ ಬಳ್ಳಾರಿಯಲ್ಲಿರುವ ಮನೆ ಮುಂದೆಯೂ ಪ್ರತಿಭಟನೆ ನಡೆಸಲು ಕೆಎಸ್ಸಾರ್ಟಿಸಿ ನೌಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ.