ಲಕ್ನೋ: ಉತ್ತರ ಪ್ರದೇಶದ ಶಹಜಹಾನ್ಪುರ ಜಿಲ್ಲೆಯಲ್ಲಿ ಮಹತ್ವಾಕಾಂಕ್ಷೆಯ ಗಂಗಾ ಎಕ್ಸ್ಪ್ರೆಸ್ ವೇ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಶಿಲಾನ್ಯಾಸ ನೆರವೇರಿಸಿದರು.
ಸುಮಾರು 594 ಕಿಮೀ ಉದ್ದದ ಬರೋಬ್ಬರಿ 36,230 ಕೋಟಿ ರೂಪಾಯಿ ಅಂದಾಜು ವೆಚ್ಚದ ಗಂಗಾ ಎಕ್ಸ್ಪ್ರೆಸ್ ವೇ ಯೋಜನೆಯಾಗಿದೆ.
ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಪ್ರಧಾನಿ ಮೋದಿ, ಗಂಗಾ ಎಕ್ಸ್ಪ್ರೆಸ್ ಹೈವೇ ಉತ್ತರ ಪ್ರದೇಶದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು.
ಯುವಕರಿಗೆ ಉದ್ಯೋಗ ಪಡೆಯಲು ಇದು ಸಹಕಾರಿಯಾಗಿದೆ ಎಂದ ಅವರು, ಮೀರತ್, ಹಾಪುರ್, ಬುಲಂದ್ಶಹರ್, ಅಮ್ರೋಹಾ, ಸಂಭಾಲ್, ಬದೌನ್, ಶಹಜಹಾನ್ಪುರ್, ಹರ್ದೋಯಿ, ಉನ್ನಾವೋ, ರಾಯ್ಬರೇಲಿ, ಪ್ರತಾಪ್ಗಢ್ ಮತ್ತು ಪ್ರಯಾಗ್ರಾಜ್ನ ಜನರ ಸಹಕಾರವನ್ನು ಬಯಸಿದರು.