ಮುಂಬಯಿ: ರಾಷ್ಟ್ರ ರಾಜಕಾರಣದ ಕೌತುಕದ ಕೇಂದ್ರಬಿಂದು ಎನಿಸಿದ್ದ ಮಹಾರಾಷ್ಟ್ರದಲ್ಲಿ ಹಠಾತ್ ತೀರ್ಮಾನವೊಂದು ರಾಜಕೀಯ ಬೆಳವಣಿಗೆಗೆ ನಿಋಣಾಯಕ ತಿರುವು ನೀಡಿದೆ. ವಿಶ್ವಾಸಗಿಟ್ಟಿಸುವ ಮೊದಲೇ ಸಿಎಂ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವ ಮೂಲಕ ಮಹಾರಾಷ್ಟ್ರದಲ್ಲಿನ ಮಹಾ ಅಘಾಡಿ ಸರ್ಕಾರ ಪತನಗೊಂಡಿದೆ. ಯುದ್ಧಕ್ಕೆ ಮುನ್ನವೇ ಸಿಎಂ ಶಸ್ತ್ರತ್ಯಾಗ ಮಾಡುರುವ ಸನ್ನಿವೇಶ ಅದರ ಮಿತ್ರಪಕ್ಷ ಕಾಂಗ್ರೆಸ್‌ಗೂ ಮುಜುಗರದ ಪರಿಸ್ಥಿತಿಯನ್ನು ತಂದಿಟ್ಟಿದೆ.
ಮಹಾರಾಷ್ಟ್ರದಲ್ಲಿ ಬಂಡಾಯದ ಬಿರುಗಾಳಿಗೆ ಸಿಲುಕಿರುವ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ ಅಘಾಡಿ ಸರ್ಕಾರ ಪತನಗೊಂಡಿದೆ. ಬಹು ಮತ ಸಾಬೀತಿಗೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಬುಧವಾರ ರಾತ್ರಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
ಶಿವಸೇನೆಯ ಬಂಡಾಯ ನಾಯಕ ಏಕನಾಥ ಶಿಂಧೆ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಹಾದಿ ಸುಗಮವಾಗಿದೆ.






































































