ಬೆಳಗಾವಿ: ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ಬೆಳಗಾವಿ ಜಿಲ್ಲೆಯ ಆರು ಮಂದಿ ಮಧ್ಯಪ್ರದೇಶದ ಜಬಲಪೂರ ಪೆಹರಾ ಬಳಿ ಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಎರಡು ದಿನಗಳ ಹಿಂದೆ ಗೋಕಾಕ್ನಿಂದ ಹಲವರು ಪ್ರಯಾಗ್ರಾಜ್ನ ಕುಂಭಮೇಳಕ್ಕೆ ಕ್ರೂಸರ್ ವಾಹನದಲ್ಲಿತೆರಳುತ್ತಿದ್ದರು ಸೋಮವಾರ ಬೆಳಗಿನ ಜಾವ ಕ್ರೂಸರ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ಬಸ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇಬ್ಬರು ಗಾಯಗೊಂಡಿದ್ದು ಆಸ್ಪತ್ರಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.



















































