ಮಾಜಿ ಶಾಸಕ ಸಿ.ಎಮ್. ನಿಂಬಣ್ಣವರ್ ವಿಧಿವಶ; ಗಣ್ಯರ ಕಂಬನಿ
ಬೆಂಗಳೂರು: ಕಲಘಟಗಿ ಕ್ಷೇತ್ರದ ಮಾಜಿ ಶಾಸಕ ಸಿಎಮ್ ನಿಂಬಣ್ಣವರ್ ನಿಧನ
ಧಾರವಾಡ: ಕಲಘಟಗಿ ಮಾಜಿ ಶಾಸಕ ಸಿ.ಎಮ್. ನಿಂಬಣ್ಣವರ್ ವಿಧಿವಶರಾಗಿದ್ದಾರೆ.
ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಅವರು ಭಾನುವಾರ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
2018ರ ವಿಧಾನಸಭಾ ಚುನಾವಣೆಯಲ್ಲಿ ಧಾರವಾಡ ಜಿಲ್ಲೆ ಕಲಘಟಗಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಅವರು ಆಯ್ಕೆಯಾಗಿದ್ದರು. ಮಾಜಿ ಶಾಸಕ ಸಿ.ಎಮ್. ನಿಂಬಣ್ಣವರ್ ನಿಧನಕ್ಕೆ ಬಿಜೆಪಿ ನಾಯಕರನೇಕರು ಶೋಕ ವ್ಯಕ್ತಪಡಿಸಿದ್ದಾರೆ.