ಬೆಂಗಳೂರು: ಮೀಸಲಾತಗಾಗಿ ಕುರುಬ ಸಮುದಾಯದ ಸಮರ ಮುಂದುವರಿದೆ. ಬೇಡಿಕೆ ಈಡೇರುವವರೆಗೂ ಹೋರಾಟ ನಡೆಸುವುದಾಗಿ ಸಮುದಾಯದ ಮುಖಂಡರು ರಾಜ್ಯ ಸರ್ಕಾರಕ್ಕೆ ಸಂದೇಶ ರವಾನಿಸಿದ್ದಾರೆ.
ಕುರುಬರ ಸಮಾಜಕ್ಕೆ ಐದು ಅಂಶಗಳ ಬೇಡಿಕೆಗಳು ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘದ ವತಿಯಿಂದ ಹೋರಾಟ ನಡೆಯುತ್ತಿದೆ. ಬೆಂಗಳೂರಿನ ಮೌರ್ಯ ವೃತ್ತ ಬಳಿ ನಡೆದ ಪ್ರತಿಭಟನೆಯಲ್ಲಿ ಯುವಜನರನೇಕರು ರಣಕಹಳೆ ಮೊಳಗಿಸಿದರು.
ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡ (ಎಸ್.ಟಿ) ಮೀಸಲಾತಿಗೆ ಸೇರ್ಪಡೆ ಮಾಡಬೇಕು ಮತ್ತು ಕುಲಶಾಸ್ತ್ರ ಅಧ್ಯಯನವನ್ನು ಕೊಡಲೆ ತರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು.
ಜಾತಿ ಸಿಂಧುತ್ವ ಆದೇಶವನ್ನು ಯಥಾಸ್ಥಿತಿ ಮುಂದುವರಿಸಬೇಕು. ಜಾತಿ ಜನಗಣತಿ ಸಮೀಕ್ಷೆ ವರದಿಯನ್ನು ಕೊಡಲೆ ಬಿಡುಗಡೆ ಮಾಡಿ ಮೀಸಲಾತಿ ಪ್ರಕಟಿಸಬೇಕು. ಕುರುಬರ ಅಭಿವೃದ್ದಿ ಪ್ರಾಧಿಕಾರ ರಚನೆ ಮಾಡಿ 500ಕೋಟಿ ಅನುದಾನ ಮೀಸಲು ಇಡಬೇಕು ಎಂದು ಮುಖಂಡರು ಆಗ್ರಹಿಸಿದ್ದಾರೆ.