ಮಂಗಳೂರು: ಕರಾವಳಿ ಮಲೆನಾಡಲ್ಲಿ ಮುಂಗಾರು ಚುರುಕಾಗಿದ್ದು, ರಾಜ್ಯಾದ್ಯಂತ ಜುಲೈ 8ರವರೆಗೂ ಭಾರೀ ಮಳೆಯಾಗುವ ಮುನ್ಸೂಚನೆ ವ್ಯಕ್ತವಾಗಿದೆ.
ಹವಾಮಾನ ಇಲಾಖೆಯ ಪ್ರಕಾರ ಕರಾವಳಿ, ಮಲೆನಾಡು, ಕೊಡಗು ಸಹಿತ ವಿವಿಧ ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಉತ್ತಮ ಮಳೆಯಾಗಲಿದೆ ದಕ್ಷಿಣಕನ್ನಡ-ಉಡುಪಿ ಸಹಿತ ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಇನ್ನುಳಿದ ಕಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ


















































