ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಅವರು ಭಾನುವಾರ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ಸುದೀರ್ಘ ಹೊತ್ತು ಮಾತುಕತೆ ನಡೆಸಿದರು.
ಕೆಲ ಸಮಯದ ಹಿಂದೆ ಇಬ್ರಾಹಿಂ ಅವರು ಕಾಂಗ್ರೆಸ್ ತ್ಯಜಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆ ಸಂದರ್ಭದಲ್ಲಿ ಸಿದ್ದರಾಮಯ್ಯ ಸಹಿತ ಹಲವರು ಇಬ್ರಾಹಿಂ ಮನವೊಲಿಸಲು ಹರಸಾಹಸಪಟ್ಟಿದ್ದರು. ಇದೀಗ ಸಿ.ಎಂ.ಇಬ್ರಾಹಿಂ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ನಡೆಸಿದ ಮಾತುಕತೆ ಕಾಂಗ್ರೆಸ್ ಪಾಳಯದಲ್ಲಿ ಕುತೂಹಲಕಾರಿ ವಿದ್ಯಮಾನವಾಗಿದೆ.
ವಿಧಾನ ಪರಿಷತ್ ಪ್ರತಿಪಕ್ಷ ನಾಯಕನ ಸ್ಥಾನದ ಮೇಲೆ ಕಣ್ಣಿಟ್ಟಿರುವ ಇಬ್ರಾಹಿಂ ಅವರು ಈ ಸಂಬಂಧ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರೆಂದು ಹೇಳಲಾಗುತ್ತಿದೆ.