ಮಂಗಳೂರು: ಇತ್ತೀಚಿಗೆ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರೂ ಆಗಿರುವ ಜೆ.ಪಿ.ನಡ್ಡಾ ಅವರು ಮೇ 11 ರಂದು ಮಂಗಳೂರಿಗೆ ಭೇಟಿ ನೀಡಲಿದ್ದು, ಸುಹಾಸ್ ಶೆಟ್ಟಿ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.
ಮೇ11 ಮತ್ತು 12 ರಂದು ಎರಡು ದಿನ ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸ ಕೈಗೊಳ್ಳುವ ಜೆ. ಪಿ. ನಡ್ಡಾ ಅವರು ಮೇ 11 ರಂದು ಧರ್ಮಸ್ಥಳದ ಮಂಜುನಾಥ ದೇವಾಲಯಕ್ಕೂ ಭೇಟಿ ನೀಡಲಿದ್ದಾರೆ ಎಂದು ನಾಯಕರು ತಿಳಿಸಿದ್ದಾರೆ.