ಮೇ 3 ರಂದು ಅಮಿತ್ ಷಾ ಭೇಟಿ: ರಾಜ್ಯ ಬಿಜೆಪಿಯಲ್ಲಿ ಸಂಚಲನ
ಬೆಂಗಳೂರು, ಏಪ್ರಿಲ್ 29: ಮೇ 3 ರಂದು ಬಹುತೇಕವಾಗಿ ಕೇಂದ್ರ ಸಚಿವ ಅಮಿತ್ ಷಾ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದು, ಅವಕಾಶ ಪಡೆದು ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಜೆ.ಎಸ್.ಗ್ರೂಪ್ ಆಫ್ ಕಂಪನಿ ಆಯೋಜಿಸಿದ್ದ ನೂತನಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ದೆಹಲಿಯಲ್ಲಿ ಮುಖ್ಯಮಂತ್ರಿಗಳ ಹಾಗೂ ಸಿ.ಜೆಗಳ ಸಮ್ಮೇಳನದಲ್ಲಿ ಭಾಗವಹಿಸಲು ತೆರಳುತ್ತಿದ್ದು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿಲ್ಲ. ವರಿಷ್ಠರು ಸೂಕ್ತ ಸಮಯದಲ್ಲಿ ನಿರ್ಧಾರ ಮಾಡುವುದಾಗಿ ಹೇಳಿದ್ದಾರೆ ಎಂದರು.