ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆತ್ಮಾಹುತಿ ಬಾಂಬ್ ದಾಳಿ ಬೆದರಿಕೆ ಪತ್ರ ಕಳುಹಿಸಿ ಆತಂಕ ಸೃಷ್ಠಿಸಲಾಗಿದ್ದ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಪ್ರಕರಣ ಸಂಬಂಧ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಎಪ್ರಿಲ್ 24 ಮತ್ತು 25 ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಆ ಸಂದರ್ಭದಲ್ಲಿ ವಿಧ್ವಂಸಕ ನಡೆಸುವ ಬೆದರಿಕೆ ಒಡ್ಡಲಾಗಿತ್ತು ಎನ್ಬಲಾಗಿದೆ.
ಬಂಧಿತನನ್ನು ಕೊಚ್ಚಿ ನಿವಾಸಿ ಕ್ಸೇವಿಯರ್ ಎಂದು ಗುರುತಿಸಲಾಗಿದೆ. ಈತ ವ್ಯಾಪಾರಿಯಾಗಿದ್ದು ಬೇರೆಯವರ ಹೆಸರಿನಲ್ಲಿ ಬೆದರಿಕೆ ಪತ್ರ ಬರೆದಿದ್ದಾನೆನ್ನಲಾಗಿದ್ದು, ಈ ಸಂಬಂಧ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.