ನವದೆಹಲಿ: ಉತ್ತರ ಕನ್ನಡ ಜಿಲ್ಲೆ ಯಲ್ಲಾಫುರ ಬಳಿ ಸಂಭವಿಸಿದ ಲಾರಿ ಅಪಘಾತದಲ್ಲಿ 11 ಮಂದಿ ಮೃತಪಟ್ಟಿದ್ದು, ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ, ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬದವರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.