ಬೆಳಗಾವಿ: ನಾಯಕತ್ವ ವಿಚಾರದಲ್ಲಿ ಮಾತನಾಡದಂತೆ ಸಚಿವ ಸತೀಶ ಜಾರಕಿಹೊಳಿ ಅವರಿಗೆ ನೋಟಿಸ್ ಕೊಟ್ಟಿಲ್ಲ ಎಂದು ಪ್ರದೇಶ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಚಿವ ಸತೀಶ ಜಾರಕಿಹೊಳಿ ಅವರಿಗೆ ನೋಟಿಸ್ ಕೊಟ್ಟಿದ್ದು ನನಗೆ ಗೊತ್ತಿಲ್ಲ ಎಂದರು. ಯಾವ ಸಚಿವರಿಗೂ ನೋಟೀಸ್ ನೀಡಿಲ್ಲ. ಸಚಿವರು ಅಥವಾ ವ್ಯಕ್ತಿಗೆ ಯಾವುದೇ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ ಎಂದು ಸುರ್ಜೇವಾಲ ಸ್ಪಷ್ಟಪಡಿಸಿದರು. ಬಿಜೆಪಿಯವರು ವದಂತಿ ಹರಡಿಸುತ್ತಿದ್ದಾರೆ. ಬಿಜೆಪಿ ಪ್ರಾಯೋಜಿತ ಆಧಾರ ರಹಿತ ಮಾತುಗಳ ಮೇಲೆ ವಿಶ್ವಾಸವಿಡಬೇಡಿ ಎಂದವರು ಹೇಳಿದರು.