ಬೆಂಗಳೂರು:
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಜನತಾಮಿತ್ರ ಜನ ಸಂಪರ್ಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾಜಿ ಶಾಶಕ ಕೆ.ಎನ್. ರಾಜಣ್ಣ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದರು. ದೇವೇಗೌಡರು ಈ ರಾಜ್ಯದ ಪಿತಾಮಹ. ಕರ್ನಾಟಕದ ಆರೂವರೆ ಕೋಟಿ ಜನರ ತಂದೆ. ಆದರೆ, ದೇವೇಗೌಡರ ಹುಟ್ಟು, ಸಾವಿನ ಬಗ್ಗೆ ಮಾತನ್ನಾಡುತ್ತಾರೆ. ರಾಜಣ್ಣ ನಿಮಗೆ ಅಪ್ಪ ಇಲ್ಲವಾ ? ಎಂದು ಪ್ರಶ್ನಿಸಿದರು.
ದೇವೇಗೌಡರು ಅಜರಾಮರರು. ಅವರಿಗೆ ಸಾವಿಲ್ಲ. ಇವರು ಕೆಂಪು ಕೋಟೆ ಮೇಲೆ ಧ್ವಜ ಹಾರಿಸಿದವರು. ಸೂರ್ಯ, ಚಂದ್ರ ಇರೋವರೆಗೂ ಅವರ ಹೆಸರು ಶಾಶ್ವತವಾಗಿರುತ್ತದೆ. ಮಾಜಿ ಶಾಸಕ ರಾಜಣ್ಣ ಕೂಡಲೇ ದೇವೇಗೌಡರ ಮನೆಗೆ ಬಂದು ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದರು

















































