ಬೆಳಗಾವಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ಕುರಿತಂತೆ ಮಾಹಿತಿ ಹಂಚಿಕೊಂಡ ಅವರು ರಾಜೀನಾಮೆ ಬಗ್ಗೆ ನಿರ್ಧರಿಸಿದ್ದು ಹೌದು. ಆದರೆ ಇದೀಗ ಆ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ತಿಳಿಸಿದರು.
ಸಚಿವ ಸ್ಥಾನ ಪಡೆಯಲು ದೆಹಲಿಯವರೆಗೆ ಹೋಗಿ ಲಾಭಿ ನಡೆಸಿದ್ದ ರಮೇಶ ಜಾರಕಿಹೊಳಿ ಬಳಿಕ ಮುಂಬೈಗೆ ಹೋಗಿ ಬಿಜೆಪಿ ಹಾಗೂ ಆರೆಸ್ಸೆಸ್ ನಾಯಕರ ಮೇಲೂ ಒತ್ತಡ ಹೇರಿದ್ದರು. ಇದ್ಯಾವುದೂ ಫಲ ನೀಡಲ್ಲ ಎಂಬ ಸುಳಿವು ವ್ಯಕ್ತವಾಗುತ್ತಿದ್ದಂತೆಯೇ ರಾಜೀನಾಮೆ ನೀಡುವ ಮಾಹಿತಿ ಹರಿದಾಡಿತ್ತು. ಆದರೆ ಇದೀಗ ಈ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ರಮೇಶ್ ಜಾರಕಿಹೊಳಿ ಅವರೇ ತಿಳಿಸಿದ್ದಾರೆ.
ಪಕ್ಷದ ಹಿರಿಯರ, ಸ್ವಾಮೀಜಿಗಳ ಹಾಗೂ ಹಿತೈಷಿಗಳ ಸಲಹೆ ಮೇರೆಗೆ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ಸ್ಪಷ್ಟಪಡಿಸಿದರು.