ಬೆಂಗಳೂರು: ಕೊರೋನಾ ಸೋಂಕು ತಡೆ ಉದ್ದೇಶದಿಂದ ಲಾಕ್ ಡೌನ್ ಜಾರಿಯಾದ ಸಂದರ್ಭದಲ್ಲೇ ರಾಜ್ಯದಲ್ಲಿ ಶಾಲಾ ಕಾಲೇಜುಗಳು ಬಂದ್ ಆಗಿದ್ದವು. ಕಳೆದ ವರ್ಷಾಂತ್ಯದಲ್ಲಿ ಉನ್ನತ ಶಿಕ್ಷಣ ತರಗತಿಗಳು ನಡೆದಿವೆ. ಆದರೆ ಈ ಬಾರಿ ಈಗಿನ್ನೂ ಶಾಲಾ ಕಾಲೇಜುಗಳು ಸಮರ್ಪವಾಗಿ ಆರಂಭವಾಗಿಲ್ಲ.
ಇದೀಗ ಮತ್ತೆ ಶಾಲಾ ಕಾಲೇಜು ಆರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಮೊದಲ ಹಂತದಲ್ಲಿ 9, 10, 11, 12ನೇ ತರಗತಿ ಆರಂಭಿಸಲು ಸರ್ಕಾರ ತೀರ್ಮಾನಿಸಿದೆ.
ಈ ಕುರಿತಂತೆ ಬೆಂಗಳೂರಿನಲ್ಲಿ ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಬ್ಯಾಚ್ ವೈಸ್ ತರಗತಿ ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಕೊರೊನಾ ತೀವ್ರತೆ ನೋಡಿಕೊಂಡು ಮುಂದಿನ ನಿರ್ಧಾರ ಮಾಡುತ್ತೇವೆ ಎಂದರು. ಪ್ರಾಥಮಿಕ ಶಾಲೆ ಆರಂಭ ಬಗ್ಗೆ ತಜ್ಞರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.