ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಗುಡುಗು-ಮಿಂಚಿನ ಸಮೇತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ತುಮಕೂರು, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.





































































