ದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಯಿಂದ ಪಾರಾಗಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸುತ್ತ್ತಿರುವ ಕಾನೂನು ಹೋರಾಟದಲ್ಲಿ ಮತ್ತೆ ಹಿನ್ನಡೆಯಾಗಿದೆ. ಮೋದಿ ಉಪನಾಮದ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರ ಶಿಕ್ಷೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಈ ಕುರಿತಂತೆ ಪ್ರತಿಕ್ರಿಯಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರ ಶಿಕ್ಷೆಗೆ ತಡೆಯಾಜ್ಞೆ ತರಲು ಕಾನೂನು ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದಾರೆ.