ಬೆಂಗಳೂರು,ನ.14: 25 ವರ್ಷಗಳಿಂದ ಮಹಿಳೆಯರು ಮಕ್ಕಳು ಮತ್ತು ನೊಂದ ಕುಟುಂಗಳಿಗೆ ನೆರವಾಗಿ ಸೇವೆಸಲ್ಲಿಸುತ್ತಾ ಬಂದಿರುವ ‘ಪರಿಹಾರ ಸೇವಾ ಸಂಸ್ಥೆ’ ಯು ಮಕ್ಕಳ ದಿನಾಚರಣೆಯ ಪ್ರಯುಕ್ತ ವಿಭಿನ್ನ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.. ಇನ್ ಫ್ಯಾಂಟ್ರಿ ರಸ್ತೆಯಲ್ಲಿರುವ ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಮಕ್ಕಳ ಜಾತ್ರೆ ಕಾರ್ಯಕ್ರಮವನ್ನು ಆಯೋಜಿಸಿತ್ತು.
ನಟ ಯಶ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಈ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಹೆಚ್ಚುವರಿ ಆಯುಕ್ತ ಉಮೇಶ್ ಪಾಲ್ಗೊಂಡಿದ್ದರು. ಹಲವಾರು ಶಾಲೆಗಳಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಕ್ಕಳು ತಮ್ಮ ಪ್ರತಿಭೆಯ ಪ್ರದರ್ಶನವನ್ನೂ ಮಾಡಿ ಗಮನ ಸೆಳೆದರು..