ಮುಂಬಯಿ: ಮಹಾರಾಷ್ಟ್ರದಲ್ಲಿ ಏಕನಾಥ ಶಿಂಧೆ ನೇತೃತ್ವದ ಶಿವಸೇನೆ-ಬಿಜೆಪಿ ಸರ್ಕಾರ ವಿಶ್ವಾಸನತ ಗೆದ್ದಿದೆ. ಕಳೆದ ವಾರ ಅಸ್ತಿತ್ವಕ್ಕೆ ಬಂದಿರುವ ಶಿವಸೇನೆಯ ಏಕನಾಥ ಶಿಂಧೆ ಬಣ ಮತ್ತು ಬಿಜೆಪಿ ನೇತೃತ್ವದ ನೂತನ ಸರ್ಕಾರ ಮಹಾರಾಷ್ಟ್ರ ವಿಧಾನಸಭೆಯಲ್ಲಿಂದು ಬಹುಮತ ಸಾಬೀತುಪಡಿಸಿದೆ.
288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ 144 ಸ್ಥಾನಗಳ ಅಗತ್ಯವಿತ್ತು. ಸಿಎಂ ಏಕನಾಥ ಶಿಂಧೆ ಪರ 164 ಮತಗಳು ಬಂದಿವೆ.


















































