ಬೆಂಗಳೂರು: ರಾಜ್ಯದ ಅನುದಾನಿತ ಹಾಗೂ ಅನುದಾನ ರಹಿತ ಖಾಸಗಿ ಶಾಲೆಗಳು ಪೂರ್ವ ಪ್ರಾಥಮಿಕ ಹಂತದಿಂದ ಪ್ರೌಢಶಾಲಾ ಹಂತದವರೆಗೂ ನಡೆಸುವ ಶಾಲಾ ಪ್ರವೇಶ ಪ್ರಕ್ರಿಯೆಯಲ್ಲಿ ಶೇ. 50ರಷ್ಟು ಸೀಟುಗಳನ್ನು ಹೆಣ್ಣುಮಕ್ಕಳಿಗೆ ಮೀಸಲಿಡುವುದು ಇನ್ನು ಮುಂದೆ ಕಡ್ಡಾಯ.
ರಾಜ್ಯ ಪಠ್ಯಕ್ರಮ ಹಾಗೂ ಸಿಬಿಎಸ್ಇ, ಐಸಿಎಸ್ಇ ಸೇರಿದಂತೆ ಕೇಂದ್ರ ಪಠ್ಯಕ್ರಮ ಅನುಸರಿಸುವ, ಸಹ ಶಿಕ್ಷಣ ಹೊಂದಿರುವ ಎಲ್ಲ ಖಾಸಗಿ ಶಾಲೆಗಳು ಎಲ್ಕೆಜಿ, ಯುಕೆಜಿ, ಒಂದನೇ ತರಗತಿಯಿಂದ 10ನೇ ತರಗತಿಯವರೆಗೆ ಪ್ರವೇಶ ನೀಡುವಾಗ ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸರ್ಕಾರ ಆದೇಶಿಸಿದೆ.
ಪ್ರತಿ ತರಗತಿಯಲ್ಲೂ ಲಭ್ಯವಿರುವ ಸೀಟುಗಳಲ್ಲಿ ಶೇ 50ರಷ್ಟು ಹೆಣ್ಣು ಮಕ್ಕಳಿಗೆ ಮೀಸಲಿಡಬೇಕು. ಒಂದು ವೇಳೆ ನಿರೀಕ್ಷಿತ ಅರ್ಜಿಗಳು ಲಭ್ಯವಿಲ್ಲದೇ ಇದ್ದಾಗ ಉಳಿಕೆ ಸೀಟುಗಳನ್ನು ಬಾಲಕರಿಗೆ ನೀಡಬಹುದು. ಈ ಕುರಿತು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ ಎಂದು ಆಡಳಿತ ಪಕ್ಷ ಕಾಂಗ್ರೆಸ್ ತನ್ನ ‘X’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.
ಅನುದಾನಿತ ಹಾಗೂ ಅನುದಾನ ರಹಿತ ಖಾಸಗಿ ಶಾಲೆಗಳು ಪೂರ್ವ ಪ್ರಾಥಮಿಕ ಹಂತದಿಂದ ಪ್ರೌಢಶಾಲಾ ಹಂತದವರೆಗೂ ನಡೆಸುವ ಶಾಲಾ ಪ್ರವೇಶ ಪ್ರಕ್ರಿಯೆಯಲ್ಲಿ ಶೇ. 50ರಷ್ಟು ಸೀಟುಗಳನ್ನು ಹೆಣ್ಣುಮಕ್ಕಳಿಗೆ ಮೀಸಲಿಡುವುದು ಇನ್ನು ಮುಂದೆ ಕಡ್ಡಾಯ.
ರಾಜ್ಯ ಪಠ್ಯಕ್ರಮ ಹಾಗೂ ಸಿಬಿಎಸ್ಇ, ಐಸಿಎಸ್ಇ ಸೇರಿದಂತೆ ಕೇಂದ್ರ ಪಠ್ಯಕ್ರಮ ಅನುಸರಿಸುವ, ಸಹ ಶಿಕ್ಷಣ… pic.twitter.com/qc2yHelGuj
— Karnataka Congress (@INCKarnataka) April 20, 2025