ನಾಡಿನೆಲ್ಲೆಡೆ ಮಕರ ಸಂಕ್ರಾಂತಿಯನ್ನು ಆಚರಿಸಲಾಗುತ್ತಿದೆ. ಉತ್ತರಾಯಣ ಪರ್ವಕಾಲದಲ್ಲಿ ಸಂಕ್ರಾಂತಿ ಸಡಗರ ಹೆಚ್ಚಿದೆ. ನಾಡಿನ ದೇವಾಲಯಗಳಲ್ಲಿ ಮನೆ-ಮನೆಗಳಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಪುಟ ಸಹೋದ್ಯೋಗಿ ಎಲ್. ಮುರುಗನ್ ಅವರ ನಿವಾಸದಲ್ಲಿ ಏರ್ಪಡಿಸಲಾದ ಸಂಕ್ರಾಂತಿ (ಪೊಂಗಲ್) ಹಬ್ಬದ ಆಚರಣೆಯಲ್ಲಿ ಪಾಲ್ಗೊಂಡರು. ಸಾಂಪ್ರದಾಯಿಕ ಪೂಜೆ, ಆರತಿ ಮತ್ತು ಗೋಪೂಜೆ ನೆರವೇರಿಸಿ ಗಮನಸೆಳೆದರು.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇಂದ್ರ ಸಚಿವರಾದ ಶ್ರೀ ಎಲ್. ಮುರುಗನ್ ಅವರ ನಿವಾಸದಲ್ಲಿ ಏರ್ಪಡಿಸಲಾದ ಸಂಕ್ರಾಂತಿ (ಪೊಂಗಲ್) ಹಬ್ಬದ ಆಚರಣೆಯಲ್ಲಿ ಪಾಲ್ಗೊಂಡು ಸಾಂಪ್ರದಾಯಿಕ ಪೂಜೆ, ಆರತಿ ಮತ್ತು ಗೋಪೂಜೆ ನೆರವೇರಿಸಿದರು.#Sankranthi pic.twitter.com/QukIK4PMqJ
— BJP Karnataka (@BJP4Karnataka) January 14, 2026

























































