ದೆಹಲಿ: ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರ ಜತೆ ಚರ್ಚೆಯಾಗಿಲ್ಲ. ಸುಪ್ರೀಂ ಕೋರ್ಟ್ ಬಿಬಿಎಂಪಿ ಹಾಗೂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸೂಚಿಸಿರುವ ಹಿನ್ನೆಲೆಯಲ್ಲಿ ಅದರ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ದೆಹಲಿ ಭೇಟಿ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಮಿತ್ ಶಾ ಅವರ ಸೂಚನೆಯಂತೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ಮಾತನಾಡಿ ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯ ಸಭಾ ಚುನಾವಣೆಗೆ ಕಳುಹಿಸಲಾಗಿರುವ ಪಟ್ಟಿಯ ಬಗ್ಗೆ ವಿವರಗಳನ್ನು ನೀಡಲಾಗಿದೆ ಎಂದರು.
ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ 24 ಕಡೇ ದಿನಾಂಕ ವಾಗಿದ್ದು. ತುರ್ತಾಗಿ ನಿರ್ಣಯ ಗಳನ್ನು ಕೈಗೊಳ್ಳಬೇಕಿದೆ. ರಾಜ್ಯ ಸಭೆ ಚುನಾವಣೆಗೆ 31 ರವರೆಗೆ ಸಮಯಾವಕಾಶವಿದೆ. ಕೋರ್ ಕಮಿಟಿ ಚರ್ಚೆಯ ನಿರ್ಣಯಗಳ ಬಗ್ಗೆ ಅರುಣ್ ಸಿಂಗ್ ಅವರಿಗೆ ತಿಳಿಸಲಾಗಿದೆ.ಆದಷ್ಟು ಬೇಗನೆ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ ಎಂದರು.





















































