ಬೆಂಗಳೂರು: ಸಚಿವ ಉಮೇಶ್ ಕತ್ತಿ ನಿಧನಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಉಮೇಶ್ ಕತ್ತಿ ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ,ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ,ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ pic.twitter.com/tcfNlw9Cdr
— Basavaraj S Bommai (Modi Ka Parivar) (@BSBommai) September 6, 2022
























































