ಶ್ರೀನಿವಾಸಪುರ: ಬದುಕು ಎಲ್ಲರಿಗೂ ಒಂದೇ ತರನಾಗಿದೆ..ಇಲ್ಲಿ ಬಡವ ಶ್ರೀಮಂತನೆಂಬ ಭೇದ ಭಾವವಿಲ್ಲ. ಬೀದಿ ಬದಿ ವ್ಯಾಪಾರಸ್ಥನಿಗೂ ಯಾವುದೇ ಅಡೆತಡೆಗಳಿಲ್ಲದೆ ವ್ಯಾಪಾರ ಮಾಡಿಕೊಂಡು ಜೀವನ ನಡೆಸುವ ಸ್ವಾತಂತ್ರ್ಯವನ್ನು ಕಲ್ಪಿಸುವುದೇ ನಮ್ಮ ಉದ್ದೇಶ ಎಂಬುದಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ. ಪಟ್ಟಣದಲ್ಲಿ ಪುರಸಭೆ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಲಾಗಿದೆ. ಅಲ್ಲಿಗೆ ಭೇಟಿ ನೀಡಿರುವ ಮಾಜಿ ಸ್ಪೀಕರ್, ವ್ಯಾಪಾರಸ್ಥರಿಂದ ನೇರವಾಗಿ ಅಲ್ಲಿನ ವ್ಯವಸ್ಥೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.
© 2020 Udaya News – Powered by RajasDigital.