ಬೆಂಗಳೂರು: ಸೈಲೆಂಟ್ ಸುನಿಲ್ ಮತ್ತು ಬಿಜೆಪಿಗೆ ಯಾವುದೇ ಸಂಬಂಧವಿಲ್ಲ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್ ತಿಳಿಸಿದ್ದಾರೆ.
ಸೈಲೆಂಟ್ ಸುನಿಲ್, ಬಿಜೆಪಿ ಸದಸ್ಯತ್ವ ಪಡೆದಿದ್ದರೆ ಅದನ್ನು ರದ್ದು ಮಾಡಲಾಗುವುದು. ಅವರು ಪಾರ್ಟಿ ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದರೆ, ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.