ದೆಹಲಿ : ಮಧ್ಯ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಕಾನೂನು ಇಲಾಖೆಗೆ ಹಾಗೂ ಅಡ್ವೊಕೇಟ್ ಜನರಲ್ ಅವರಿಗೆ ಸಂಪೂರ್ಣ ಅಧ್ಯಯನ ಮಾಡುವಂತೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ವೋಚ್ಚ ನ್ಯಾಯಾಲಯದ ಆದೇಶ ಪ್ರತಿ ನಮಗೆ ಬಂದಿಲ್ಲ. ಸರ್ವೋಚ್ಚ ನ್ಯಾಯಾಲಯ ಚುನಾವಣಾ ಆಯೋಗ ಏನು ತೀರ್ಮಾನ ಮಾಡುತ್ತಾರೆ ಅದನ್ನು ಪಾಲಿಸಲಾಗುವುದು ಎಂದರು.
ಸರ್ವೋಚ್ಛ ನ್ಯಾಯಾಲಯದ ಆದೇಶ ಎಲ್ಲಾ ರಾಜ್ಯಗಳಿಗೆ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಅನ್ವಯವಾಗುತ್ತದೆ ಚುನಾವಣಾ ಆಯೋಗದೊಂದಿಗೆ ಚರ್ಚೆ ಮಾಡಲಾಗುವುದು. ಅವರು ಸೂಚಿಸಿದಂತೆ ಕ್ರಮ ವಹಿಸಲಾಗುವುದು ಎಂದರು.