ಬೆಂಗಳೂರು: ಹಟ್ಟಿ ಚಿನ್ನದ ಕಂಪನಿ ನಿಯಮಿತದ ವತಿಯಿಂದ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ 5 ಕೋಟಿ ರೂ.ಗಳ ದೇಣಿಗೆಯ ಚೆಕ್ ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ಹಸ್ತಾಂತರ ಮಾಡಲಾಯಿತು.
ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಬಸಪ್ಪ ಆಚಾರ್, ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಮಾನಪ್ಪ.ಡಿ.ವಜ್ಜಲ್ ಹಾಗೂ ಸಂಸ್ಥೆಯ ನಿರ್ದೇಶಕರು ಉಪಸ್ಥಿತರಿದ್ದರು.