ಬೆಂಗಳೂರು: ಶಿವಮೊಗ್ಗದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷಾ ಕೊಲೆ ಘಟನಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಖಂಡಿಸಿದ್ದಾರೆ.
ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಅವರನ್ನು ದುಷ್ಕರ್ಮಿಗಳು ಹತ್ಯೆಗೈದಿರುವುದು ಖಂಡನೀಯ ಎಂದಿರುವ ಅವರು ಆರೋಪಿಗಳ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಶಿವಮೊಗ್ಗದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ಅವರ ಹತ್ಯೆ ಅತ್ಯಂತ ಖಂಡನೀಯ. ಹತ್ಯೆಯ ಹಿಂದಿರುವ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸುತ್ತೇನೆ – ಶ್ರೀ @nalinkateel, ರಾಜ್ಯಾಧ್ಯಕ್ಷರು#NalinSpeaks pic.twitter.com/uDk6pZ3igF
— BJP Karnataka (@BJP4Karnataka) February 21, 2022
ಇದೇ ವೇಳೆ, ಟ್ವೀಟ್ ಮಾಡಿ ಪ್ರತಿಕ್ರಿಯಿಸಿರುವ ಅವರು, ಹಿಜಾಬ್ ವಿವಾದದ ನಡುವೆ ಇಂತಹ ಕೃತ್ಯಗಳ ಮೂಲಕ ಸಮಾಜದಲ್ಲಿ ಶಾಂತಿ ಕದಡಲು ಯತ್ನ ನಡೆಯುತ್ತಿದೆ ಎಂದು ದೂರಿದ್ದಾರೆ.
ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಅವರನ್ನು ದುಷ್ಕರ್ಮಿಗಳು ಹತ್ಯೆಗೈದಿರುವುದು ಖಂಡನೀಯ.
ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸಲು ಸನ್ಮಾನ ಸಿಎಂ @BSBommai ಹಾಗೂ ಮಾನ್ಯ ಗೃಹಸಚಿವರಾದ @JnanendraAraga ಅವರಲ್ಲಿ ಮನವಿ ಮಾಡುತ್ತೇನೆ.
ಹಿಜಾಬ್ ವಿವಾದದ ನಡುವೆ ಇಂತಹ ಕೃತ್ಯಗಳ ಮೂಲಕ ಸಮಾಜದಲ್ಲಿ ಶಾಂತಿ ಕದಡಲು ಯತ್ನ ನಡೆಯುತ್ತಿದೆ.
— Nalinkumar Kateel (@nalinkateel) February 21, 2022