ಬೆಂಗಳೂರು: ಹಿರಿಯ ಕನ್ನಡ ಪರ ಹೋರಾಟಗಾರ, ಸಾಹಿತಿ ಚಂದ್ರಶೇಖರ ಪಾಟೀಲ ಇಂದು ವಿಧಿವಶರಾಗಿದ್ದಾರೆ. ಕವಿ, ನಾಟಕಕಾರ, ಕನ್ನಡ ಪರ ಹೋರಾಟಗಾರರೂ ಆಗಿರುವ ಇವರು ಚಂಪಾ ಎಂದೇ ಜನಜನಿತರಾಗಿದ್ದರು.
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರೂ ಆಗಿದ್ದ ಚಂಪಾ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.