ಧಾರವಾಡ: ಖ್ಯಾತಿ ಕವಿ ನಾಡೋಜ ಚೆನ್ನವೀರ ಕಣವಿ ವಿಧಿವಶರಾಗಿದ್ದಾರೆ. 93ರ ಹರೆಯದ ಅವರು, ಅಸೌಖ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಧಾರವಾಡದ ಎಸ್ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಅಕ್ಯೂಟ್ ರೆಸ್ಪಿರೇಟರಿ ಡಿಸ್ಟ್ರೆಸ್ ಸಿಂಡ್ರೋಮ್ನಿಂದ ಬಳಲುತ್ತಿದ್ದ ಕಣವಿಯವರು ಸುಮಾರು ಒಂದು ತಿಂಗಳಿನಿಂದ ಎಸ್ಡಿಎಂ ಆಸ್ಪತ್ರೆಯಲ್ಲಿ ಕಣವಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಅವರು ಚೇತರಿಸಿಕೊಂಡಿದ್ದರೂ ಕೊರೊನಾ ಸೋಂಕು ದೃಢಪಟ್ಟಿತ್ತು. ವೈದ್ಯರು ತೀವ್ರ ನಿಗಾವಹಿಸಿ ಚಿಕಿತ್ಸೆ ನೀಡುತ್ತಿದ್ದರಾದರೂ ಅವರ ದೇಹ ಚಿಕಿತ್ಸೆಗೆ ಸ್ಪಂಧಿಸಿಲ್ಲ ಎನ್ನಲಾಗಿದೆ.