ಬೆಂಗಳೂರು: ಹಿರಿಯ ನಟ ರಾಜೇಶ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
‘ರಾಜೇಶ್ ಅವರು ಹಿರಿಯ ನಟರು, ಅತ್ಯುತ್ತಮ ಕಲಾವಿದರು. ನಾವು ಅವರ ಚಿತ್ರಗಳನ್ನು ನೋಡಿ ಬೆಳೆದವರು. ಅವರ ಅಗಲಿಕೆ ನೋವು ತಂದಿದೆ. ರಾಜೇಶ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಶಿವಕುಮಾರ್ ತಿಳಿಸಿದ್ದಾರೆ.