ಬೆಂಗಳೂರು: ಮುಡಾ ನಿವೇಶನ ಅಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಬಗ್ಗೆ ಕಾಂಗ್ರೆಸ್ ಆಕ್ರೋಶ ತಣ್ಣಗಾಗಿಲ್ಲ. ಬಿಜೆಪಿ-ಜೆಡಿಎಸ್ ನಾಯಕರ ವಿರುದ್ದದ ಮನವಿಗಳಿಗೂ ಸೂಕ್ತ ಕ್ರಮ ಕೈಗೊಳ್ಳಿ ಎಂದು ಕಾಂಗ್ರೆಸ್ ನಾಯಕರು ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ.
ಈ ಸಂಬಂಧ ಶನಿವಾರ ಕಾಂಗ್ರೆಸ್ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಮಾಡಲಿದ್ದಾರೆ.
ಈ ಕುರಿತಂತೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ, ಮುಡಾ ಹಗರಣದಲ್ಲಿ ನಾನು ತಪ್ಪೇ ಮಾಡಿಲ್ಲ. ಆದರೂ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದಾರೆ ಎಂದರು.
ನಾಳೆ (ಶನಿವಾರ) ಕಾಂಗ್ರೆಸ್ ಶಾಸಕರು, ಸಂಸದರು, ಎಂಎಲ್ಸಿಗಳು ರಾಜ್ಯಪಾಲರನ್ನು ಭೇಟಿಯಾಗುತ್ತಾರೆ. ಕುಮಾರಸ್ವಾಮಿ, ನಿರಾಣಿ, ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ಗೆ ಒತ್ತಾಯಿಸುತ್ತಾರೆ ಎಂದು ಸಿಎ. ತಿಳಿಸಿದರು.
ಕುಮಾರಸ್ವಾಮಿ ವಿರುದ್ಧ ತನಿಖೆ ಆಗಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಆದರೂ ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟಿಲ್ಲ. ಹೀಗಾಗಿ ನಮ್ಮ ಶಾಸಕರು ರಾಜ್ಯಪಾಲರನ್ನು ಭೇಟಿ ಮಾಡಿ ಒತ್ತಾಯಿಸುತ್ತಾರೆ ಎಂದವರು ತಿಳಿಸಿದರು.