ಪಂಚಗಂಗಾ ನದಿ ನೀರಿನಿಂದ ರಾಷ್ಟ್ರೀಯ ಹೆದ್ದಾರಿ 4 ಜಲಾವೃತಗೊಂಡಿದೆ. ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಮಹಾರಾಷ್ಟ್ರದ ಕೊಲ್ಲಾಪುರ ಬಳಿ ಹತ್ತಿರದಲ್ಲಿ ನಿಪ್ಪಾಣಿಯ ಯಮಗರ್ಣಿ ಬಳಿ ಹೆದ್ದಾರಿಗೆ ನೀರು ತುಂಬಿಕೊಂಡಿದೆ. ನೀರಿನಿಂದ ಹೆದ್ದಾರಿ ಆವೃತವಾಗಿದೆ.
ಹೀಗಾಗಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ.
ನಿತ್ಯ ಲಕ್ಷಾಂತರ ವಾಹನಗಳು ಓಡಾಡುವ ಮುಖ್ಯ ಹೆದ್ದಾರಿ ಇದಾಗಿದೆ. ಅಂತರರಾಜ್ಯ ಸರಕು ಸಾಗಣೆಯ ಪ್ರಮುಖ ರಾಷ್ಟ್ರೀಯ ಹೆದ್ದಾರಿ 4 ಇದಾಗಿದ್ದು, ವಾಹನಗಳ ಸಂಚಾರ ಬಂದ್ ಆಗಿರೋದ್ರಿಂದ ಅಪಾರ ನಷ್ಟ ಸಂಭವಿಸುವ ಲಕ್ಷಣಗಳು ಕಂಡು ಬಂದಿವೆ.