ದೆಹಲಿ: ಅಗತ್ಯ ವಸ್ತುಗಳ ಮೇಲೆ ಜಿಎಸ್ಟಿ ಹೇರುವ ಮೂಲಕ ಜನಸಾಮಾನ್ಯರ ಮೇಲೆ ಕೇಂದ್ರ ಸರ್ಕಾರ ಬರೆ ಎಳೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ದೆಹಲಿಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಸಂಸತ್ ಭವನ ಹಾಗೂ ಅಲ್ಲಿನ ಗಾಂಧಿ ಪ್ರತಿಮೆ ಎದುರು ಜಮಾಯಿಸಿದ ಕಾಂಗ್ರೆಸ್ ಮುಖಂಡರು ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದರು. ಈ ಪ್ರತಿಭಟನೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ. ಕೆ. ಸುರೇಶ್ ಅವರು ಭಾಗವಹಿಸಿದ್ದರು.
© 2020 Udaya News – Powered by RajasDigital.


























































