ಬೆಂಗಳೂರು: ಅತಿಥಿ ಉಪನ್ಯಾಸಕರ ವೇತನವನ್ನು 5 ಸಾವಿರ ಹೆಚ್ಚಳಕ್ಕೆ ರಾಜ್ಯ ಸರ್ಕಾರ ನಿರ್ಧಾರಿಸಿದೆ.
ಕಳೆದ ಒಂದು ತಿಂಗಳಿಂದ ಅತಿಥಿ ಉಪನ್ಯಾಸಕರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ವೇತನ ಹೆಚ್ಚಿಸುವ ನಿರ್ಧಾರ ಪ್ರಕಟಿಸಿದೆ.
ವಿಕಾಸೌಧದಲ್ಲಿ ಸುದ್ದಿಗಾರರಿಗೆ ಮಾಹಿತಿ ಒದಗಿಸಿದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಅತಿಥಿ ಉಪನ್ಯಾಸಕರ ವೇತನ 5 ಸಾವಿರ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು.

























































